Mysore
31
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ಇದು ನಾಗರಿಕರ ಜೇಬು ತುಂಬಿಸುವ ಬಜೆಟ್‌ ಎಂದ ಪ್ರಧಾನಿ ನರೇಂದ್ರ ಮೋದಿ  

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಜೆಟ್‌ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್‌ ಜನಸಾಮಾನ್ಯರ ಬಜೆಟ್‌ ಆಗಿದೆ. ಹಣ ಉಳಿತಾಯ ಮತ್ತು ಹೂಡಿಕೆಗೆ ಬಜೆಟ್‌ ಉತ್ತೇಜನ ನೀಡುತ್ತದೆ. ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

ಇನ್ನು ಈ ಬಜೆಟ್‌ನಲ್ಲಿ ವಾರ್ಷಿಕ 12 ಲಕ್ಷ ರೂವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಎಲ್ಲಾ ಆದಾಯ ಗುಂಪುಗಳಿಗೆ ತೆರಿಗೆಗಳನ್ನು ಸಹ ಕಡಿಮೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗಕ್ಕೆ ತುಂಬಾ ಪ್ರಯೋಜನವಾಗಲಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಜೆಟ್‌ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಿಗೆ, ಹಡಗು ನಿರ್ಮಾಣ ಮತ್ತು ಸಮುದ್ರ ಕೈಗಾರಿಕೆಗಳಿಗೆ ಹಾಗೂ ದೇಶಾದ್ಯಂತ ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಈ ಬಜೆಟ್‌ನಲ್ಲಿ ಮೊದಲ ಬಾರಿಗೆ ಹೋಟೆಲ್‌ ಗಳನ್ನು ಮೂಲಸೌಕರ್ಯ ವ್ಯಾಪ್ತಿಗೆ ತರುವ ಮೂಲಕ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನ ಸಿಗುತ್ತದೆ ಎಂದು ಹೇಳಿದರು.

Tags: