ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಬಜೆಟ್ ಮಂಡನೆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಜೆಟ್ ಜನಸಾಮಾನ್ಯರ ಬಜೆಟ್ ಆಗಿದೆ. ಹಣ ಉಳಿತಾಯ ಮತ್ತು ಹೂಡಿಕೆಗೆ ಬಜೆಟ್ ಉತ್ತೇಜನ ನೀಡುತ್ತದೆ. ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
ಇನ್ನು ಈ ಬಜೆಟ್‌ನಲ್ಲಿ ವಾರ್ಷಿಕ 12 ಲಕ್ಷ ರೂವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಎಲ್ಲಾ ಆದಾಯ ಗುಂಪುಗಳಿಗೆ ತೆರಿಗೆಗಳನ್ನು ಸಹ ಕಡಿಮೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗಕ್ಕೆ ತುಂಬಾ ಪ್ರಯೋಜನವಾಗಲಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಬಜೆಟ್ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಿಗೆ, ಹಡಗು ನಿರ್ಮಾಣ ಮತ್ತು ಸಮುದ್ರ ಕೈಗಾರಿಕೆಗಳಿಗೆ ಹಾಗೂ ದೇಶಾದ್ಯಂತ ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಜೆಟ್‌ನಲ್ಲಿ ಮೊದಲ ಬಾರಿಗೆ ಹೋಟೆಲ್ ಗಳನ್ನು ಮೂಲಸೌಕರ್ಯ ವ್ಯಾಪ್ತಿಗೆ ತರುವ ಮೂಲಕ ಪ್ರವಾಸೋದ್ಯಮಕ್ಕೆ ದೊಡ್ಡ ಉತ್ತೇಜನ ಸಿಗುತ್ತದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…