Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಪಕ್ಷ ಸಂಘಟನೆ ಮಾಡದವರು ನಿವೃತ್ತಿ ಹೊಂದಲಿ: ಮಲ್ಲಕಾರ್ಜುನ ಖರ್ಗೆ

ಅಹಮಾದಾಬಾದ್:‌ ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಯಾರು ಕೆಲಸ ಮಾಡುವುದಿಲ್ಲವೋ ಅಂತಹವರು ಪಕ್ಷದಿಂದ ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಪೂರ್ಣಗೊಂಡ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರ ಪಾತ್ರ ದೊಡ್ಡದಿದೆ. ಪಕ್ಷ ನೀಡಿದ ಜವಬ್ದಾರಿಯನ್ನು ನಿರ್ವಹಿಸಬೇಕು. ಹಾಗಾಗಿ, ಏಐಸಿಸಿ ಮಾರ್ಗಸೂಚಿಯಂತೆ ಜಿಲ್ಲಾಧ್ಯಕ್ಷ ನೇಮಕವನ್ನು ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಒಂದು ವರ್ಷದೊಳಗೆ ಜನರನ್ನು ಸೇರಿಸಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಭವಿಷ್ಯದಲ್ಲಿ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೇಂದ್ರ ಸರ್ಕಾರವು ರಾಷ್ಟ್ರೀಯತೆ ಹೆಸರಿನಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದೆ. ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಇವರಲ್ಲಿ ಬಹುತೇಕರು ಭಯದಿಂದ ಬದುಕುವಂತೆ ಮಾಡಲಾಗುತ್ತಿದೆ. ಇದು ಅಪಮಾನಕರ ಮಾತ್ರವಲ್ಲ, ಸಂವಿಧಾನದ ವಿರುದ್ಧದ ಅಪರಾಧ ಎಂದು ಹೇಳಿದರು.

Tags: