ಅಹಮಾದಾಬಾದ್: ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಯಾರು ಕೆಲಸ ಮಾಡುವುದಿಲ್ಲವೋ ಅಂತಹವರು ಪಕ್ಷದಿಂದ ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಪೂರ್ಣಗೊಂಡ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಪಾತ್ರ ದೊಡ್ಡದಿದೆ. ಪಕ್ಷ ನೀಡಿದ ಜವಬ್ದಾರಿಯನ್ನು ನಿರ್ವಹಿಸಬೇಕು. ಹಾಗಾಗಿ, ಏಐಸಿಸಿ ಮಾರ್ಗಸೂಚಿಯಂತೆ ಜಿಲ್ಲಾಧ್ಯಕ್ಷ ನೇಮಕವನ್ನು ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಹೇಳಿದರು.
ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಒಂದು ವರ್ಷದೊಳಗೆ ಜನರನ್ನು ಸೇರಿಸಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಭವಿಷ್ಯದಲ್ಲಿ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೇಂದ್ರ ಸರ್ಕಾರವು ರಾಷ್ಟ್ರೀಯತೆ ಹೆಸರಿನಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದೆ. ಮುಸ್ಲಿಂರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಇವರಲ್ಲಿ ಬಹುತೇಕರು ಭಯದಿಂದ ಬದುಕುವಂತೆ ಮಾಡಲಾಗುತ್ತಿದೆ. ಇದು ಅಪಮಾನಕರ ಮಾತ್ರವಲ್ಲ, ಸಂವಿಧಾನದ ವಿರುದ್ಧದ ಅಪರಾಧ ಎಂದು ಹೇಳಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…