ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ದಿಲ್ಲಿ ಪೊಲೀಸ್ ವಿಶೇಷ ಘಟಕ ಎಫ್‌ಐಆರ್ ದಾಖಲಿಸಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196, 197, 152 ಮತ್ತು 61 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಮೊದಲು ಪನ್ನುನ್ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿ ದಿಲ್ಲಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕದಡುವುದಾಗಿ ಬೆದರಿಕೆ ಹಾಕಿದ್ದ. ರಾಜಧಾನಿಯಾದ್ಯಂತ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರವನ್ನು ಹೆಚ್ಚಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.




