Mysore
20
scattered clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರು ಎನ್‌ಕೌಂಟರ್‌ಗೆ ಬಲಿ

pahalgam attack

ಶ್ರೀನಗರ: ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದುಬಂದಿದೆ.

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್‌ ಸೇರಿದಂತೆ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕಳೆದ ಏಪ್ರಿಲ್.‌22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು. ಈಗ ಮೂವರು ಉಗ್ರರನ್ನು ಸೇನೆ ಹಾಗೂ ಪೊಲೀಸರು ಸದೆಬಡಿದಿದ್ದು, ಈ ಡ್ರೋನ್‌ನಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!