Mysore
30
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್.‌7ರಿಂದ 10ರವರೆಗೆ ಉತ್ತರ ಭಾರತದಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ರಾಜಸ್ಥಾನ, ದೆಹಲಿ, ಎನ್‌ಸಿಆರ್‌, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್.7ರಿಂದ 9ರವರೆಗೆ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಉತ್ತರಾಖಂಡ, ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಗಂಟೆಗೆ 70 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ರಾಜಸ್ಥಾನದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

 

Tags:
error: Content is protected !!