ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ.
2019ರಿಂದ 2024ರ ಅವಧಿಯಲ್ಲಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ಯುಕ್ತವಾದ ತುಪ್ಪ ಬಳಕೆ ಮಾಡಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಈ ಬಗ್ಗೆ ಗೊತ್ತಿದ್ದರೂ ಟಿಟಿಡಿ ತುಪ್ಪ ಖರೀದಿ ಮುಂದುವರಿಸಿತ್ತು ಎಂದು ಸಿಬಿಐ ಬಹಿರಂಗಪಡಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ತನಿಖಾ ತಂಡ ಆಂಧ್ರಪ್ರದೇಶ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ತುಪ್ಪದಲ್ಲಿ ಬೀಟಾ ಸೆಟೋಸ್ಟೇರಾಲ್ ಎಂಬ ರಾಸಾಯನಿಕ ಇರುವುದನ್ನು ಪತ್ತೆ ಮಾಡಿದ್ದು, ಗಂಭೀರ ಗುಣಮಟ್ಟ ಸಮಸ್ಯೆ ಬಗ್ಗೆ ತಿಳಿದುಕೊಂಡಿದ್ದರೂ ಟಿಟಿಡಿ ಕ್ರಮ ಕೈಗೊಳ್ಳಲು ವಿಫಲವಾಯಿತು.
2020ರಲ್ಲಿ ಟಿಟಿಡಿ ಅಧಿಕಾರಿಗಳು ಮೊದಲು ತುಪ್ಪದ ಟೆಂಡರ್ ನಿಯಮ ಬಿಗಿಗೊಳಿಸಿದರು. ನಂತರ ಯಾವುದೇ ಸ್ಪಷ್ಟನೆ ನೀಡದೇ ಕೇವಲ ಐದೇ ತಿಂಗಳಿನಲ್ಲಿ ಟೆಂಡರ್ ನಿಯಮ ಸಡಿಲಗೊಳಿಸಿದ್ದರು ಎಂದು ಹೇಳಿದೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…