ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರಾಖಂಡದ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್ ಜೈನ್, ವೈಷ್ಣವಿ ಡೈರಿ ಸಿಇಓ ಅಪೂರ್ವ ವಿನಯ್ ಕಾಂತ್ ಚಾವ್ಹಾ, ದುಂಡಿಗಲ್‌ನ ಎಆರ್ ಡೈರಿ ಎಂಡಿ ರಾಜಶೇಖರನ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಆರೋಪಿಗಳೆಲ್ಲಾ ತುಪ್ಪ ಪೂರೈಕೆಯ ನೆಪದಲ್ಲಿ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ವೈಷ್ಣವಿ ಡೈರಿ ಮುಂದೆ ಎಆರ್ ಡೈರಿ ಹೆಸರಿರುವ ಸುಳ್ಳು ದಾಖಳೆಗಳು ಮತ್ತು ಸೀಲುಗಳನ್ನು ಬಳಸಿ ಟೆಂಡರ್ ಪಡೆದಿದೆ ಎನ್ನಲಾಗಿದೆ.
ಇದೆಲ್ಲದರ ಜೊತೆಗೆ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿರುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…