ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಗುಜರಾತ್ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿರುವ ಟಿಡಿಪಿ ಪಕ್ಷದ ವಕ್ತಾರ ಅನಂ ವೆಂಕಟರಮಣ ರೆಡ್ಡಿ, ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಅವಧಿಯಲ್ಲಿ ತಿರುಪತಿ ಪ್ರಸಾದ ತಯಾರಿಕೆಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಟೀಕಿಸಿದ್ದಾರೆ. ಸದ್ಯ ಈ ಆರೋಪ ಆಂಧ್ರ ಪ್ರದೇಶದಲಿ ಸಂಚಲನ ಸೃಷ್ಟಿಮಾಡಿದೆ.
ಲಾಡುವಿನ ತಯಾರಿಕೆಯಲ್ಲಿ ಬಳಕೆಯಾದ ತುಪ್ಪದ ಮಾದರಿಯ ದನ ಹಾಗೂ ಹಂದಿ ಕೊಬ್ಬು, ಮೀನಿನ ಎಣ್ಣೆಯ ಮಾದರಿಗಳು ಪತ್ತೆಯಾಗಿವೆ. ಈ ಮಾದರಿಯನ್ನು 2024ರ ಜುಲೈ 9 ರಂದು ಸಂಗ್ರಹಿಸಲಾಗಿದೆ. ಜುಲೈ 16 ರಂದು ಪ್ರಯೋಗಾಲಯ ತನ್ನ ವರದಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಪ್ರಯೋಗಾಲಯದ ವರದಿಯನ್ನು ಆಂಧ್ರ ಪ್ರದೇಶದ ಸರ್ಕಾರವಾಗಲೀ ಅಥವಾ ವೆಂಕಟೇಶ್ವರ ಸ್ವಾಮಿ ದೇಗುಲವಾಗಲಿ ಖಾತ್ರಿಪಡಿಸಿಲ್ಲ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…