ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಲೆ ಕುಸಿತ ಸೇರಿ ಹಲವಾರು ಸಮಸ್ಯೆಗಳಿಗೆ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ರಾಜ್ಯದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ನಾವು ಸಚಿವರಿಗೆ ಈ ಮನವಿ ಸಲ್ಲಿಸಿದ್ದೇವೆ. ಇದೇ ವೇಳೆ ನಮ್ಮ ಜತೆಯಲ್ಲಿದ್ದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಚಿವ ಪಿಯುಷ್ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು ಎಂದು ನಿಖಿಲ್ ಹೇಳಿದ್ದಾರೆ.
ನೆರೆ ರಾಜ್ಯಗಳಲ್ಲಿ ತಂಬಾಕು ಬೆಳೆಗಾರಿಗೆ ಉತ್ತಮ ದರ ಸಿಗುತ್ತಿದೆ. ಕರ್ನಾಟಕದ ಬೆಳೆಗಾರರಿಗೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಾವು ಗಮನ ಹರಿಸಿ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ತಂಬಾಕಿನ ಬೆಲೆ ಪ್ರತಿ ಕೆಜಿಗೆ ಸರಾಸರಿ ₹320 ಇದೆ. ಕರ್ನಾಟಕದಲ್ಲಿ ಪ್ರತಿ ಕೆಜಿಗೆ ₹265 ಇದೆ. ಕಡಿಮೆ ಬೆಳೆಯಿಂದಾಗಿ ಬಡ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಬಹಳ ನಷ್ಟವಾಗುತ್ತಿದೆ ಎಂಬ ಅಂಶವನ್ನು ಗೋಯಲ್ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತಂದರೆ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಗಾತ್ರದ ಬೆಳೆಗಾರರಿಗೆ ಸಹಾಯ ಆಗುತ್ತದೆ ಹಾಗೂ ತಂಬಾಕು ಬೆಳೆಗೂ ಬೆಂಬಲ ಬೆಲೆ ನೀಡಿದರೆ ಬಡ ಕುಟುಂಬಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಿದಂತೆ ಆಗುತ್ತದೆ. ಐಟಿಸಿಯಂತಹ ಬೃಹತ್ ಕಂಪನಿಗಳು ಇಂತಹ ಬೆಳೆಗಾರರಿಂದ ನೇರವಾಗಿ ತಂಬಾಕು ಖರೀದಿಸುವಂತೆ ಸೂಚನೆ ಕೊಡಬೇಕು ಎಂದು ಪಿಯೂಷ್ ಗೋಯಲ್ ಅವರಲ್ಲಿಅನಾವಿ ಮಾಡಲಾಗಿದೆ ಎಂದು ನಿಖಿಲ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಅತ್ಯಂತ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿ, ಅಧಿಕಾರಿಗಳಿಗೆ ಕೆಲ ಆದೇಶಗಳನ್ನು ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಆಮೂಲಾಗ್ರವಾಗಿ ಚರ್ಚೆ ಮಾಡುವಂತೆ ಹೇಳಿದರು. ಅದರಂತೆ ನಾವು ಅವರ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕರಾದ ಜಿ.ಟಿ.ಹರೀಶ್ ಗೌಡ, ಕೋಲಾರ ಸಂಸದರಾದ ಮಲ್ಲೇಶ್ ಬಾಬು ಹಾಗೂ ತಂಬಾಕು ಬೆಳೆಗಾರರು ನಿಯೋಗದಲ್ಲಿ ಇದ್ದರು.
ಇದಕ್ಕೂ ಮುನ್ನ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಿಯೋಗವು, ಇದೇ ವಿಷಯಕ್ಕೆ ಸಂಬಂಧಿಸಿ ಮನವಿ ಸಲ್ಲಿಸಿತು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…