ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಇತರ ನಾಯಕರು ವಾಜಪೇಯಿ ಅವರ ಸ್ಮಾರಕವಾದ ‘ಸದೈವ್ ಅಟಲ್’ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
1998-2004ರ ನಡುವೆ 6 ವರ್ಷಗಳ ಕಾಲ ಪ್ರಧಾನಿಯಾಗಿದ್ದ ವಾಜಪೇಯಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತರು. ಅಟಲ್ ಬಿಹಾರಿ ವಾಜಪೇಯಿ 2018ರಲ್ಲಿ 93ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.