ದೇಶ- ವಿದೇಶ

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿಗೆ: ಏನೆಲ್ಲಾ ಬದಲಾವಣೆಗಳು ಗೊತ್ತಾ.?

ನವದೆಹಲಿ: ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ.

ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ಈ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಗೆ ಮುನ್ನುಡಿ ಬರೆಯಲಿದೆ.

ಶೂನ್ಯ ಎಫ್‌ಐಆರ್‌, ಪೊಲೀಸ್‌ ದೂರುಗಳ ಆನ್‌ಲೈನ್‌ ನೋಂದಣಿ, ಎಸ್‌ಎಂಎಸ್‌ನಂತಹ ಎಲೆಕ್ಟ್ರಾನಿಕ್‌ ಮಾಧ್ಯಮಗಳ ಮೂಲಕ ಸಮನ್ಸ್‌ ಮತ್ತು ಎಲ್ಲಾ ಘೋರ ಅಪರಾಧಗಳಿಗೆ ಅಪರಾಧ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿಯಂತಹ ನಿಬಂಧನೆಗಳನ್ನು ಒಳಗೊಂಡಿವೆ. ಪ್ರಸ್ತುತ ಕೆಲವು ಸಾಮಾಜಿಕ ವಾಸ್ತವತೆಗಳು ಮತ್ತು ಅಪರಾಧಗಳನ್ನು ಪರಿಹರಿಸಲು ಈ ಕಾನೂನುಗಳು ಪ್ರಯತ್ನಿಸಲಿವೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಆದರ್ಶಗಳನ್ನು ಗಮನದಲ್ಲಿಟ್ಟುಕೊಂಡು ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಕಾರ್ಯವಿಧಾನವನ್ನು ಒದಗಿಸಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹೊಸ ಕಾನೂನುಗಳ ಪ್ರಕಾರ, ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡ 45 ದಿನಗಳಲ್ಲಿ ತೀರ್ಪು ಬರಬೇಕು. ಮೊದಲ ವಿಚಾರಣೆಯ 60 ದಿನಗಳಲ್ಲಿ ಆರೋಪಪಟ್ಟಿ ರಚಿಸಬೇಕು. ಅತ್ಯಾಚಾರ ಸಂತ್ರಸ್ತರ ಹೇಳಿಕೆಯನ್ನು ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಆಕೆಯ ಪೋಷಕರು ಅಥವಾ ಸಂಬಂಧಿಕರ ಸಮ್ಮುಖದಲ್ಲಿ ದಾಖಲಿಸಿಕೊಳ್ಳಬೇಕು ಮತ್ತು ವೈದ್ಯಕೀಯ ವರದಿಗಳು ಏಳು ದಿನಗಳಲ್ಲಿ ಬರಬೇಕು.

ಇದರ ಜೊತೆಗೆ ಹೊಸ ಕಾನೂನುಗಳ ಪ್ರಕಾರ ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡ 45 ದಿನಗಳಲ್ಲಿ ತೀರ್ಪು ಬರಬೇಕು. ಸಂಘಟಿತ ಅಪರಾಧಗಳು ಮತ್ತು ಭಯೋತ್ಪಾದನೆಯ ಕೃತ್ಯಗಳನ್ನು ವ್ಯಾಖ್ಯಾನಿಸಲಾಗಿದೆ. ದೇಶದ್ರೋಹವನ್ನು ದೇಶವಿರೋಧಿ ಎಂದು ಬದಲಾಯಿಸಲಾಗಿದೆ. ಭಾರತೀಯ ದಂಡ ಸಂಹಿತೆಯಲ್ಲಿನ 511 ಸೆಕ್ಷನ್‌ಗಳ ಬದಲಿಗೆ ಕೇವಲ 358 ಸೆಕ್ಷನ್‌ಗಳು ಒಳಗೊಂಡಿವೆ.

ಇನ್ನೂ ಒಬ್ಬ ವ್ಯಕ್ತಿಯು ಈಗ ದೈಹಿಕವಾಗಿ ಪೊಲೀಸ್‌ ಠಾಣೆಗೆ ಭೇಟಿ ನೀಡುವ ಅಗತ್ಯವಿಲ್ಲ. ಬದಲಿಗೆ ಎಲೆಕ್ಟ್ರಾನಿಕ್‌ ಸಂವಹನದ ಮೂಲಕ ಘಟನೆಗಳನ್ನು ವರದಿ ಮಾಡಬಹುದು. ಬಂಧನದ ವಿವರಗಳನ್ನು ಈಗ ಪೊಲೀಸ್‌ ಠಾಣೆಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ.

ಇನ್ನೂ ಹೊಸ ಕಾನೂನುಗಳ ಅಡಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧದ ಸಂತ್ರಸ್ತರು ತಮ್ಮ ಪ್ರಕರಣದ ಪ್ರಗತಿಯನ್ನು 90 ದಿನಗಳಲ್ಲಿ ನಿಯಮಿತವಾಗಿ ಮಾಹಿತಿ ಪಡೆಯಲು ಅರ್ಹರಾಗಿರುತ್ತಾರೆ. ಇದಲ್ಲೆದರ ಜೊತೆಗೆ ಎಸ್‌ಎಂಎಸ್‌ನಂತಹ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಸಮನ್ಸ್‌ ಜಾರಿ ಮಾಡಬಹುದು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

35 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

48 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

1 hour ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

1 hour ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

2 hours ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

2 hours ago