Mysore
24
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಲೋಕಸಭೆಯಲ್ಲಿಂದು ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕ ಮಂಡನೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ವಿಪ್‌ ಜಾರಿ ಮಾಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ಒಂದು ರಾಷ್ಟ್ರ, ಒಂದೇ ಚುನಾವಣೆಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದೆ.

ಕೇಂದ್ರ ಕಾನೂನು ಸಚಿವ ಅರುಣ್‌ ರಾಮ್‌ ಮೇಘವಾಲ್‌ ಅವರು ಸಂವಿಧಾನ ಮಸೂದೆ ಹಾಗೂ ಕೇಂದ್ರ ಪ್ರಾಂತ್ಯವಾರು ಕಾಯ್ದೆಗಳು ಮಸೂದೆಯನ್ನು ಮಂಡಿಸಲಿದ್ದಾರೆ.

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಮಸೂದೆಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌ ಮತ್ತು ಡಿಎಂಕೆ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ವಿಧೇಯಕವನ್ನು ವಿರೋಧಿಸುತ್ತಿವೆ.

Tags:
error: Content is protected !!