ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ಒಂದು ರಾಷ್ಟ್ರ, ಒಂದೇ ಚುನಾವಣೆಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದೆ.
ಕೇಂದ್ರ ಕಾನೂನು ಸಚಿವ ಅರುಣ್ ರಾಮ್ ಮೇಘವಾಲ್ ಅವರು ಸಂವಿಧಾನ ಮಸೂದೆ ಹಾಗೂ ಕೇಂದ್ರ ಪ್ರಾಂತ್ಯವಾರು ಕಾಯ್ದೆಗಳು ಮಸೂದೆಯನ್ನು ಮಂಡಿಸಲಿದ್ದಾರೆ.
ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಮಸೂದೆಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ವಿಧೇಯಕವನ್ನು ವಿರೋಧಿಸುತ್ತಿವೆ.
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…