Mysore
26
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

union cabinet meeeting tomorrow

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಎಲ್ಲರ ಚಿತ್ತ ಕೇಂದ್ರ ಸಚಿವ ಸಂಪುಟ ಸಭೆಯತ್ತ ನೆಟ್ಟಿದೆ.

ಏಪ್ರಿಲ್.‌22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಗುಂಡಿನ ದಾಳಿಗೆ 26 ಮಂದಿ ಸಾವನ್ನಪ್ಪಿದ್ದರು.

ಇದನ್ನೂ ಓದಿ:- ಪಹಲ್ಗಾಮ್‌ ದಾಳಿ ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಇದಾದ ಬಳಿಕ ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್.‌23ರಂದು ಭದ್ರತೆ ಕುರಿತ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಪಾಕ್‌ ವಿರುದ್ಧ ಹಲವು ಕ್ರಮ ಕೈಗೊಳ್ಳಲಾಗಿತ್ತು.

ಇದೀಗ ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಾಕ್‌ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡುತ್ತಾ? ಇಲ್ಲಾ ಶಾಂತಿ ಒಪ್ಪಂದದ ಮೂಲಕ ಯುದ್ಧ ಆಗುವುದನ್ನು ತಪ್ಪಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Tags:
error: Content is protected !!