union cabinet meeeting tomorrow
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಎಲ್ಲರ ಚಿತ್ತ ಕೇಂದ್ರ ಸಚಿವ ಸಂಪುಟ ಸಭೆಯತ್ತ ನೆಟ್ಟಿದೆ.
ಏಪ್ರಿಲ್.22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಗುಂಡಿನ ದಾಳಿಗೆ 26 ಮಂದಿ ಸಾವನ್ನಪ್ಪಿದ್ದರು.
ಇದನ್ನೂ ಓದಿ:- ಪಹಲ್ಗಾಮ್ ದಾಳಿ ಖಂಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಇದಾದ ಬಳಿಕ ಕಳೆದ ವಾರ ಕೇಂದ್ರ ಸಚಿವ ಸಂಪುಟದ ಯಾವುದೇ ಸಭೆ ನಡೆದಿರಲಿಲ್ಲ. ಏಪ್ರಿಲ್.23ರಂದು ಭದ್ರತೆ ಕುರಿತ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಪಾಕ್ ವಿರುದ್ಧ ಹಲವು ಕ್ರಮ ಕೈಗೊಳ್ಳಲಾಗಿತ್ತು.
ಇದೀಗ ನಾಳೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಾಕ್ ವಿರುದ್ಧ ಭಾರತ ಯುದ್ಧ ಘೋಷಣೆ ಮಾಡುತ್ತಾ? ಇಲ್ಲಾ ಶಾಂತಿ ಒಪ್ಪಂದದ ಮೂಲಕ ಯುದ್ಧ ಆಗುವುದನ್ನು ತಪ್ಪಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…