Mysore
19
overcast clouds

Social Media

ಭಾನುವಾರ, 10 ನವೆಂಬರ್ 2024
Light
Dark

ನಾಳೆ ಅಪ್ಪಳಿಸಲಿರುವ ಡಾನಾ ಚಂಡಮಾರುತ: ಒಡಿಶಾ-ಪಶ್ಚಿಮ ಬಂಗಾಳದಲ್ಲಿ ಅಲರ್ಟ್‌

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಕೊಲ್ಲಿಯ ತೀರ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ.

ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಸಂಜೆ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ.

ಈ ಚಂಡಮಾರುತ ನಾಳೆ ಸಂಜೆ ಅಥವಾ ಶುಕ್ರವಾರ ಮುಂಜಾನೆ ಒಡಿಶಾಗೆ ಅಪ್ಪಳಿಸಲಿದೆ.

ಈ ವೇಳೆ ಗಾಳಿಯ ವೇಗ 100ರಿಂದ 120 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಧಾರಾಕಾರ ಮಳೆಯಾಗಲಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Tags: