Mysore
16
clear sky

Social Media

ಬುಧವಾರ, 10 ಡಿಸೆಂಬರ್ 2025
Light
Dark

ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನವದೆಹಲಿ: ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.

ದೆಹಲಿಯ ಎಲ್ಲಾ 70 ಸ್ಥಾನಗಳಿಗೂ ನಾಳೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, ದೆಹಲಿಯ 1 ಕೋಟಿ 55 ಲಕ್ಷ ಮತದಾರರು ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ, ಪೊಲೀಸ್ ಮತ್ತು ಭದ್ರತಾ ಪಡೆಗಳ ನಿಯೋಜನೆ ಪ್ರಾರಂಭವಾಗಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.

ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಕಣದಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈಗಾಗಲೇ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ. ನಾಳೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಸಂಜೆಯೇ ಮತಗಟ್ಟೆಗಳಿಗೆ ತಲುಪಿದ್ದಾರೆ.

ದೆಹಲಿಯಲ್ಲಿ ಮತದಾನದ ಸಮಯದಲ್ಲಿ 35 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇಡೀ ಪ್ರಕ್ರಿಯೆಯಲ್ಲಿ ಕೇಂದ್ರ ಮೀಸಲು ಪಡೆಗಳ 220 ಕಂಪನಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಚುನಾವಣೆಯ ಸಮಯದಲ್ಲಿ 19 ಸಾವಿರ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ.

ಈ ಬಾರಿ ದೆಹಲಿ ವಿಧಾನಸಭಾ ಚುನಾವಣೆಯ 70 ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರಿದ್ದಾರೆ. 13,766 ಮತಗಟ್ಟೆಗಳಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗ ಮತದಾರರು ಮತ ಚಲಾಯಿಸಲಿದ್ದಾರೆ. ಇದರೊಂದಿಗೆ, ಅಂಗವಿಕಲ ಮತದಾರರಿಗಾಗಿ 733 ಮತಗಟ್ಟೆಗಳನ್ನು ರಚಿಸಲಾಗಿದೆ. ಈ ಬಾರಿ ದೆಹಲಿಯಲ್ಲಿ ಗರಿಷ್ಠ ಮತದಾನವನ್ನು ಖಚಿತಪಡಿಸಿಕೊಳ್ಳಲು, ಚುನಾವಣಾ ಆಯೋಗವು ಜನರ ಅನುಕೂಲಕ್ಕಾಗಿ ವಿಶೇಷ ಕಾಳಜಿ ವಹಿಸಿದೆ. ಚುನಾವಣಾ ಆಯೋಗವು ಕ್ಯೂ ಮ್ಯಾನೇಜ್ಮೆಂಟ್ ಸಿಸ್ಟಮ್ ಆಪ್ ಅನ್ನು ಬಿಡುಗಡೆ ಮಾಡಿದೆ. ಇದರ ಮೂಲಕ ಮತದಾರರು ತಮ್ಮ ಮತಗಟ್ಟೆಯಲ್ಲಿ ಎಷ್ಟು ಜನಸಂದಣಿ ಇದೆ ಎಂಬುದನ್ನು ತಿಳಿದುಕೊಳ್ಳಬಹುದು.

Tags:
error: Content is protected !!