ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರಾಜ್ಯಗಳಿಗೂ ಭೇಟಿ ನೀಡಲಿದ್ದಾರೆ.
ನಾಳೆ ಮಧ್ಯಾಹ್ನ 1.30ರ ಸುಮಾರಿ ಪ್ರಧಾನಿ ನರೇಂದ್ರ ಮೋದಿ ಕೇರಳದ ಎರ್ನಾಕುಲಂನಲ್ಲಿ ಸುಮಾರು 10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ.
ನಂತರ ಸಂಜೆ 5.45ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಸುಮಾರು 5650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.





