ದೇಶ- ವಿದೇಶ

ನಾಳೆ ಬೆಳಿಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ PSLC-C61/EOS-09 ಕಾರ್ಯಾಚರಣೆಗೆ ಸಿದ್ಧತೆಗಳು ಅಂತಿಮ ಹಂತ ತಲುಪಿದ್ದು, ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ 101ನೇ ಉಡಾವಣೆ ನಡೆಯಲಿದೆ.

ನಾಳೆ ಬೆಳಿಗ್ಗೆ 5.59ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹ ಉಡಾವಣೆ ನಿಗದಿಯಾಗಿದ್ದು, ಈ ಕುರಿತು ಇಸ್ರೋದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಇದರ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಇಸ್ರೋ ಅಧ್ಯಕ್ಷ ವಿ.ನಾರಾಯಣನ್‌ ತಿರುಪತಿ ತಿಮ್ಮಪ್ಪನ ಮೊರೆ ಹೋದರು. ದೂರ ಸಂವೇದಿ ಉಪಗ್ರಹ ಮಿಷನ್‌ ಆದ ಪೋಲಾರ್‌ ಸ್ಯಾಟ್‌ಲೈಟ್‌ ಲಾಂಚ್‌ ವೆಹಿಕಲ್‌ ಯಶಸ್ವಿ ಉಡಾವಣೆಗೆ ಅವರು ದೇವರ ಆಶೀರ್ವಾದ ಕೋರಿದರು.

ಪಿಎಸ್‌ಎಲ್‌ವಿ-ಸಿ61 ಮೂಲಕ ಉಡಾವಣೆಯಾಗುವ 101ನೇ ಮಿಷನ್‌ ಇಡ್ರೋಗೆ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಭಾರತದ ಎಲ್ಲಾ ಹವಾಮಾನ ಭೂ ವೀಕ್ಷಣಾ ಸಾಮರ್ಥ್ಯ ಹೊಂದಿರುವ ಈ ಉಪಗ್ರಹವು ಬಾಹ್ಯಾಕಾಶ ಸಾಧನೆಗೆ ದೇಶದ ಬದ್ಧತೆಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಇಸ್ರೋ ಅಧ್ಯಕ್ಷ ನಾರಾಯಣನ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago