Mysore
26
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಾಳೆ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ಉದ್ಘಾಟನೆ

ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿದ್ದಾರೆ.

ನಾಳೆ ಸಂಜೆ 6.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸಲಿದ್ದು, ಸಚಿವ ಸತೀಶ್‌ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಜರಿರಲಿದ್ದು, ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಅವರನ್ನು ಸಹ ಆಹ್ವಾನಿಸಲಾಗಿದೆ.

ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್‌ ಅವರನ್ನು ಸಹ ಆಹ್ವಾನಿಸಲಾಗಿದೆ.

51 ವರ್ಷಕ್ಕೂ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಅಂದಾಜು 82 ಕೋಟಿ ರೂ ವೆಚ್ಚದಲ್ಲಿ ಐದು ಅಂತಸ್ತಿನ ನೂತನ ಕಟ್ಟಡ ಕಟ್ಟುವುದಕ್ಕೆ ಕರ್ನಾಟಕ ಸರ್ಕಾರ 2019ರಲ್ಲಿ ಅನುಮೋದನೆ ನೀಡಿತ್ತು. ಆಗ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದರು. ಇದೀಗ ಕಟ್ಟಡ ನಿರ್ಮಾಣದ ವೆಚ್ಚ 140 ಕೋಟಿ ರೂಗೆ ಏರಿಕೆಯಾಗಿದೆ.

ಈ ಕಟ್ಟಡವು 3532 ಚದರ ಮೀಟರ್‌ ವಿಸ್ತೀರ್ಣವನ್ನು ಹೊಂದಿದ್ದು, ಒಟ್ಟು 12,212 ಚದರ ಮೀಟರ್‌ ನಿರ್ಮಾಣ ಪ್ರದೇಶವನ್ನು ಒಳಗೊಂಡಿರುವ ಈ ಭವನವು 2ಬಿ+ಜಿ+6ಯು ರಚನೆಯಲ್ಲಿ 9 ಅಂತಸ್ತುಗಳನ್ನು ಹೊಂದಿದೆ.

Tags:
error: Content is protected !!