ದೇಶ- ವಿದೇಶ

ನಾಳೆ ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ-ವಿಪಕ್ಷ ನಡುವೆ ತೀವ್ರ ಪೈಪೋಟಿ

ಹೊಸದಿಲ್ಲಿ : ಆಡಳಿತರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದೇಶದ ೧೭ನೇ ಉಪರಾಷ್ಟ್ರಪತಿ ಚುನಾವಣೆ ನಾಳೆ(ಸೆ.9) ನಡೆಯಲಿದ್ದು, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವಿನ ಸಮರದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯ ಸಭೆ ಸದಸ್ಯರು (ನಾಮ ನಿರ್ದೇಶನ ಸೇರಿದಂತೆ) ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಂಜೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.
ಈಗಿನ ಅಂಕಿ ಸಂಖ್ಯೆಗಳ ಪ್ರಕಾರ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ. ರಾಧಾಕೃಷ್ಣನ್ ಅವರ ಗೆಲವು ತುಂಬಾ ಸ್ಪಷ್ಟವಾಗಿದೆ. ಇವರಿಗೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಪ್ರಬಲ ಸ್ಪರ್ಧೆ ಒಡ್ಡಿರುವುದು ಚುನಾವಣಾ ಕಣದ ಕಾವು ಹೆಚ್ಚುವಂತೆ ಮಾಡಿದೆ. ರಾಜಕಾರಣದಲ್ಲಿ ನಡೆಯುವ ಕೊನೆ ಕ್ಷಣದ ಬೆಳವಣಿಗೆಗಳು ಇಡೀ ಲೆಕ್ಕಚಾರವನ್ನೇ ಬುಡಮೇಲು ಮಾಡಬಹುದು.

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ, ಇದೀಗ ಕೇವಲ ಸಂಖ್ಯಾಬಲದ ಸ್ಪರ್ಧೆಯಾಗಿ ಉಳಿದಿಲ್ಲ. ಬದಲಾಗಿ, ಇದು ದಕ್ಷಿಣ ಭಾರತದ ಇಬ್ಬರು ಪ್ರಮುಖ ವ್ಯಕ್ತಿಗಳ ನಡುವಿನ ಹೋರಾಟವಾಗಿ ಮಾರ್ಪಟ್ಟಿದ್ದು, ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇದು ರಾಜಕೀಯ ತಂತ್ರಗಾರಿಕೆ ಹಾಗೂ ಸೈದ್ಧಾಂತಿಕ ಸಂಘರ್ಷಕ್ಕೆ ವೇದಿಕೆಯಾಗಿದೆ.

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ, ತಮಿಳುನಾಡಿನ ಹಿರಿಯ ರಾಜಕಾರಣಿ ಮತ್ತು ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ, ಅದರಲ್ಲೂ ವಿಶೇಷವಾಗಿ ತಮಿಳುನಾಡಿನಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುವ ಸ್ಪಷ್ಟ ಕಾರ್ಯತಂತ್ರವನ್ನು ಬಿಜೆಪಿ ಪ್ರದರ್ಶಿಸಿದೆ.

ಇದಕ್ಕೆ ಪ್ರತಿಯಾಗಿ, ಇಂಡಿಯಾ ಮೈತ್ರಿಕೂಟವು ಸುದೀರ್ಘ ಚರ್ಚೆಯ ನಂತರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ಮೂಲದ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದೆ. ಅನುಭವಿ ರಾಜಕಾರಣಿಯ ವಿರುದ್ಧ ನ್ಯಾಯಾಂಗದ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕಣಕ್ಕಿಳಿಸುವ ಮೂಲಕ, ವಿಪಕ್ಷಗಳು ಈ ಚುನಾವಣೆಯನ್ನು ಸೈದ್ಧಾಂತಿಕ ಹೋರಾಟವಾಗಿ ಪರಿವರ್ತಿಸಲು ಯತ್ನಿಸಿವೆ.

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ಜುಲೈ ೨೨ ರಂದು ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಚುನಾವಣೆ ನಡೆಯಲಿದೆ. ರಾಜ್ಯಸಭೆಯ ಕಾರ್ಯದರ್ಶಿ ಜನರಲ್ ಪಿ.ಸಿ.ಮೋದಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ರಾಜ್ಯಸಭಾ ಸಚಿವಾಲಯದ ಜಂಟಿ ಕಾರ್ಯದರ್ಶಿ ಗರಿಮಾ ಜೈನ್ ಮತ್ತು ರಾಜ್ಯಸಭಾ ಸಚಿವಾಲಯದ ನಿರ್ದೇಶಕ ವಿಜಯ್ ಕುಮಾರ್ ಅವರನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ. ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ಸಂವಿಧಾನದ ವಿಧಿ ೩೨೪ರ ಅಡಿಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ. ವಿಧಿ ೬೬(೧)ರ ಪ್ರಕಾರ, ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ಚುನಾಯಿತ ಸದಸ್ಯರು, ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡ ಚುನಾವಣಾ ಕಾಲೇಜ್ ಆಯ್ಕೆ ಮಾಡುತ್ತದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago