Mysore
28
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌ನಿಂದ ಬಂದ ಸುಮಾರು 25 ಜನರ ತೀರ್ಥಯಾತ್ರಿಕರನ್ನು ಹೊತ್ತ ದೋಣಿ ಪಿಪಾ (ತೇಲುವ) ವಂತೆನೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಚಂದ್ರ ಪ್ರಕಾಶ್‌ ಸಿಂಗ್‌ ಹೇಳಿದ್ದಾರೆ.

ಪೊಲೀಸ್ ಮತ್ತು ರಕ್ಷಣಾ ತಂಡಗಳು ತಕ್ಷಣ ಕಾರ್ಯಾಚರಣೆ ನಡೆಸಿ 22 ಮಂದಿಯನ್ನು ನೀರಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ. ಈ ಮಧ್ಯೆ ಆರು ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಮೃತರ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದರಿಂದ ಪಲ್ಟಿಯಾಗಿದೆ ಎನ್ನಲಾಗಿದೆ.

Tags:
error: Content is protected !!