ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್‌ನಿಂದ ಬಂದ ಸುಮಾರು 25 ಜನರ ತೀರ್ಥಯಾತ್ರಿಕರನ್ನು ಹೊತ್ತ ದೋಣಿ ಪಿಪಾ (ತೇಲುವ) ವಂತೆನೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್ ಹೇಳಿದ್ದಾರೆ.
ಪೊಲೀಸ್ ಮತ್ತು ರಕ್ಷಣಾ ತಂಡಗಳು ತಕ್ಷಣ ಕಾರ್ಯಾಚರಣೆ ನಡೆಸಿ 22 ಮಂದಿಯನ್ನು ನೀರಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಹುಡುಕಾಟ ಮುಂದುವರಿದಿದೆ. ಈ ಮಧ್ಯೆ ಆರು ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಮೃತರ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದರಿಂದ ಪಲ್ಟಿಯಾಗಿದೆ ಎನ್ನಲಾಗಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…