ಸೋಲ್: ಭಾರತದೊಂದಿಗೆ ಬಹು ನಿರೀಕ್ಷಿತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿದ್ದೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ.
ಅಪೆಕ್ ಶೃಂಗಸಭೆಯಲ್ಲಿ ಭಾಗಿಯಾಗಲು ದಕ್ಷಿಣ ಕೊರಿಯಾಗೆ ತೆರಳಿರುವ ಡೊನಾಲ್ಡ್ ಟ್ರಂಪ್ ಅವರು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಹಾಗೂ ಅಮೇರಿಕಾ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿವೆ. ನೀವು ಭಾರತ ಮತ್ತು ಪಾಕಿಸ್ತಾನವನ್ನು ಗಮನಿಸಿದರೆ ನಾವು ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇವೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನನಗೆ ಅಪಾರ ಗೌರವವಿದೆ. ನಾವು ಉತ್ತಮ ಬಾಂಧವ್ಯವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ವ್ಯಾಪಾರ ವಿಷಯವನ್ನು ಮುಂದಿಟ್ಟುಕೊಂಡು ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಟ್ರಂಪ್ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.





