ಅಮರಾವತಿ: ಆಂಧ್ರಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶ್ರೀಕಾಕುಳಂನ ಕಾಶಿ ಬಗ್ಗ ವೆಂಕಟೇಶ್ವರ ದೇವಾಲಯದಲಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಏಕಾದಶಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಕುರಿತು ಆಂಧ್ರ ಸಿಎಂ ಕಚೇರಿ ಮಾಹಿತಿ ನೀಡಿದೆ.
ಘಟನಾ ಸ್ಥಳಕ್ಕೆ ರಾಜ್ಯ ಕೃಷಿ ಸಚಿವ ಕೆ.ಅಚ್ಚನ್ನಾಯ್ಡು ಭೇಟಿ ನೀಡಿ ದೇವಾಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಆಂಧ್ರ ಸರ್ಕಾರ ಹೇಳಿದೆ.





