ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರ ಮೂಲದ ಸೂರಜ್ ಎಂದು ಗುರುತಿಸಲಾಗಿದೆ. ರ್ಯಾಲಿ ವೇಳೆ ಸೂರಜ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮಾರ್ಗಮಧ್ಯೆಯೇ ಸೂರಜ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸೂರಜ್ ಸಾವಿನ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀರಿಲ್ಲದೆ ಪರದಾಟ
ರ್ಯಾಲಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಬಿಸಿಲಿನ ಝಳಕ್ಕೆ ಇನ್ನು ಕೆಲವರು ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆಯೋಜಕರಿಗೆ ಸವಾಲು
ರಾಜಕೀಯ ಪ್ರವೇಶದ ಬಳಿಕ ವಿಜಯ್ ಅವರ ರ್ಯಾಲಿ ಗಳಿಗೆ ಜನಸಾಗರವೇ ಹರಿದುಬರುತ್ತಿದ್ದು, ಜನರನ್ನು ನಿಯಂತ್ರಿಸುವುದು ಮತ್ತು ಮೂಲಭೂತ ಸೌಕರ್ಯ ಒದಗಿಸುವುದು ಆಯೋಜಕರಿಗೆ ಸವಾಲಾಗಿ ಪರಿಣಮಿಸಿದೆ.
ಬೆಂಗಳೂರು: ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಕ್ಷೇತ್ರಗಳ ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾಗಿದೆ ಎಂದು ಸಚಿವ…
ಕೆ.ಆರ್.ನಗರ : ಚೀರನಹಳ್ಳಿ ಗ್ರಾಮದ ಅಭಿವೃದ್ಧಿಗೆ ಬದಲು ಇಲ್ಲಿನ ಕಾಂಗ್ರೆಸ್ ಮುಖಂಡರ ಮನೆ ಅಭಿವೃದ್ಧಿ ಆಗಿದೆ ಗ್ರಾಮದಲ್ಲಿ ಚರಂಡಿ ಕೂಡ…
ಬೆಂಗಳೂರು: ಕಾಡಿನಂಚಿನ ಗ್ರಾಮಗಳಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಆನೆಧಾಮ ಸ್ಥಾಪನೆಯಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.…
ಬೆಂಗಳೂರು: ಕೆಆರ್ಎಸ್ ಜಲಾಶಯದ ಒಳಹರಿವು ಕ್ಷೀಣಿಸಿರುವ ನಡುವೆಯೇ ಹೊರಹರಿವು ಹೆಚ್ಚಳವಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆಯಲ್ಲಿ…
ಶ್ರೀರಂಗಪಟ್ಟಣ: ನಂಜನಗೂಡಿನ ದೇವಸ್ಥಾನಕ್ಕೆ ಹೊರಟಿದ್ದ ಎರಡು ಕುಟುಂಬಗಳ ಪ್ರಯಾಣ ದುರಂತದಲ್ಲಿ ಅಂತ್ಯಗೊಂಡಿದೆ. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಸರಕು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ…