ಆಂಧ್ರಪ್ರದೇಶ: ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಸಜೀವ ದಹನಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಫ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ಪಟಾಕಿ ಘಟಕದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಉತ್ಪಾದನೆಯಲ್ಲಿ ಬಳಸುವ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿತು ಎನ್ನಲಾಗಿದೆ.





