ದೇಶ- ವಿದೇಶ

ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ: ಕಾಂಜನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ರೈಲು, ಐವರ ಸಾವು

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯ ಫನ್ಸಿಡೆವಾ ಸಮೀಪದಲ್ಲಿ ಕಾಂಜನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇಂದು(ಜೂ.17) ಬೆಳಿಗ್ಗೆ 9 ಗಂಟೆಗೆ ಈ ಘಟನೆ ಸಂಭವಿಸಿದ್ದು, ನಿಲ್ದಾಣ ಸಮೀಪ ಸಿಗ್ನಲ್‌ಗಾಗಿ ಕಾಯುತ್ತಿದ್ದ ಕಾಂಜನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಹಿಂದಿನಿಂದ ಗೂಡ್ಸ್‌ ರೈಲು ಬಂದು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ ಎರಡು ಬೋಗಿಗಳಿಗೆ ಭಾರೀ ಹಾನಿಯಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದೆ. ಗೂಡ್ಸ್‌ ಗಾಡಿ ಕಾಂಜನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ನ್ಯೂ ಜಲ್‌ಪೈಗುರಿ ಜಂಕ್ಷನ್‌ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಡಾರ್ಜಿಲಿಂಗ್‌ ಎಸ್‌ಪಿ ಅಭಿಷೇಕ್‌ ರಾಯ್‌ ಮಾಹಿತಿ ನೀಡಿದ್ದಾರೆ.

ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಜನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಎಂ, ಎಸ್‌ಪಿ, ವೈದ್ಯರು, ಆಂಬುಲೆನ್ಸ್‌ ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರದೊಂದಿಗೆ ಸಂಪರ್ಕ ಕಲ್ಪಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಭಾರತೀಯ ಪ್ರಮುಖ ರೈಲು ಆಗಿದೆ. 13174 ಸಂಖ್ಯೆಯ ಈ ಎಕ್ಸ್‌ಪ್ರೆಸ್‌ ಅಗರ್ತಲಾದಿಂದ ಸೀಲ್ಹಾಹ್‌ಗೆ ಪ್ರಯಾಣಿಸುತ್ತಿದ್ದು, ರಂಗಪಾಣಿ ಮತ್ತು ಚಥರ್‌ಹತ್‌ ನಿಲ್ದಾಣದ ಮಧ್ಯೆ ಅಪಘಾತಕ್ಕೀಡಾಗಿ ಹಳಿ ತಪ್ಪಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

11 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

11 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

11 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

11 hours ago