Mysore
27
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ.

ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ.ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಹೊಸ ದರ ಇಂದಿನಿಂದ ಜಾರಿಗೆ ಬಂದಿದೆ.

ಇದನ್ನು ಓದಿ: ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಈ ವರ್ಷ ರೈಲು ದರದಲ್ಲಿ ಇದು ಎರಡನೇ ಹೆಚ್ಚಳವಾಗಿದೆ. ಹಿಂದಿನ ಹೆಚ್ಚಳ ಜುಲೈನಲ್ಲಿ ಆಗಿತ್ತು. 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕಾಗಿ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಒಂದು ಪೈಸೆ, ಮೇಲ್?, ಎಕ್??ಪ್ರೆಸ್? ರೈಲುಗಳ ಎಸಿ ಅಲ್ಲದ ವರ್ಗದಲ್ಲಿ ಪ್ರತಿ ಕಿಲೋಮೀಟರಿಗೆ ಎರಡು ಪೈಸೆ ಮತ್ತು ಎಲ್ಲಾ ರೈಲುಗಳ ಎಸಿ ವರ್ಗದ ದರವನ್ನು ಹೆಚ್ಚಿಸಲಾಗಿತ್ತು.

ಮುಂದಿನ ಪ್ರಯಾಣಕ್ಕಾಗಿ ಡಿಸೆಂಬರ್ 26 ರ ಮೊದಲು ಬುಕ್ ಮಾಡಿದ ಟಿಕೆಟ್‍ಗಳಿಗೆ ಈ ಬದಲಾವಣೆ ಅನ್ವಯಿಸುವುದಿಲ್ಲ. 215 ಕಿಲೋಮೀಟರ್ ದೂರದವರೆಗಿನ ಸಾಮಾನ್ಯ ದರ್ಜೆಯ ಟಿಕೆಟ್‍ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ 215 ಕಿಮೀಗಿಂತ ಹೆಚ್ಚಿನ ದೂರಕ್ಕೆ ಪ್ರತಿ ಕಿಮೀಗೆ 1 ಪೈಸೆ ವೆಚ್ಚವಾಗುತ್ತದೆ. ಮೇಲ್ ಅಥವಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಹವಾನಿಯಂತ್ರಿತವಲ್ಲದ ಕೋಚ್‍ಗಳಿಗೆ, ಪ್ರತಿ ಕಿಮೀಗೆ 2 ಪೈಸೆ ಹೆಚ್ಚಳವಾಗಲಿದೆ.‌

ಹವಾನಿಯಂತ್ರಿತ ಕೋಚ್‍ಗಳಲ್ಲಿ ಪ್ರಯಾಣದ ವೆಚ್ಚವನ್ನು ಸಹ ಪ್ರತಿ ಕಿಮೀಗೆ 2 ಪೈಸೆ ಹೆಚ್ಚಿಸಲಾಗಿದೆ.ಹೊಸ ದರಗಳು ಜಾರಿಗೆ ಬಂದ ನಂತರ ಹವಾನಿಯಂತ್ರಿತವಲ್ಲದ ಬೋಗಿಗಳಲ್ಲಿ 500 ಕಿ.ಮೀ ಪ್ರಯಾಣಕ್ಕೆ 10 ರೂ. ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಹೊರೆಯಾಗುವುದು ಖಚಿತವಾಗಿದೆ.

Tags:
error: Content is protected !!