ದೇಶ- ವಿದೇಶ

ರೈಲು ದುರಂತ: ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು; ರಾಹುಲ್‌ ವಾಗ್ದಾಳಿ

ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್‌ ಬಾಗ್‌ಮತಿ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ ಡಿಕ್ಕಿಯಾಗಿತ್ತು. ಸುಮಾರು 19ಮಂದಿ ಗಂಭೀರ ಗಾಯವಾಗಿದ್ದರು. ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಬೆಂಕಿಗಾಹುತವಾಗಿದ್ದವು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೊಸ್ಟ್‌ಮಾಡಿರುವ ರಾಹುಲ್‌ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನಡನಪಿಸುವಂತಿದಿ ಎಂದಿದ್ದಾರೆ.

ಹಲವು ಅಪಘಾಯಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉತ್ತನ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ 2ಎರಡು ರೈಲುಗಳು ಮತ್ತು ಗೂಡ್ಸ್‌ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

37 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

43 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

46 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

50 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago