Mysore
16
overcast clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಪ್ರಕರಣ: ಸಂಜಯ್‌ ರಾಯ್‌ ಅಪರಾಧಿ ಎಂದು ಕೋರ್ಟ್‌ ತೀರ್ಪು

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ ಜಿ ಕರ್‌ ಮೆಡಿಕಲ್‌ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್‌ ರಾಯ್‌ ಅನ್ನು ದೋಷಿ ಎಂದು ಕೋರ್ಟ್‌ ತೀರ್ಪು ಪ್ರಕಟಿಸಿದೆ.

ಇಂದು (ಜ.18) ಕೋಲ್ಕತ್ತಾ ಸೆಷನ್ಸ್‌ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್‌ ದಾಸ್‌ ತೀರ್ಪು ಪ್ರಕಟಿಸಿದ್ದಾರೆ. 57 ದಿನಗಳಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ಅತ್ಯಾಚಾರ, ಕೊಲೆ ಸೆಕ್ಷನ್‌ಗಳಲ್ಲಿ ಸಂಜಯ್‌ ರಾಯ್‌ ಅಪರಾಧಿ ಎಂದು ಕೋರ್ಟ್‌ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ಟ್ರೈನಿ ವೈದ್ಯೆಯ ಅತ್ಯಚಾರ ಮತ್ತು ಕೊಲೆ ಪ್ರಕರಣ ಬಳಿಕ ದೇಶವ್ಯಾಪಿ ಪ್ರತಿಭಟನೆ ಆಗಿತ್ತು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ ನಂತರ ಅತ್ಯಾಚಾರ ನಡೆದಿರುವುದು ಧೃಡ ಎಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಅತ್ಯಾಚಾರ ಪ್ರಕರಣ:

ಕಳೆದ ಆ.9ರಂದು ಆರ್‌ ಜಿ ಕರ್‌ ಮೆಡಿಕಲ್‌ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ಸಂಜಯ್‌ ರಾಯ್‌ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದನು. ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದನು ಎಂಬುದನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್‌ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.

Tags: