ಕೋಲ್ಕತ್ತಾ: ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸಂಜಯ್ ರಾಯ್ ಅನ್ನು ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.
ಇಂದು (ಜ.18) ಕೋಲ್ಕತ್ತಾ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದಾರೆ. 57 ದಿನಗಳಲ್ಲಿ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ಅತ್ಯಾಚಾರ, ಕೊಲೆ ಸೆಕ್ಷನ್‌ಗಳಲ್ಲಿ ಸಂಜಯ್ ರಾಯ್ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಟ್ರೈನಿ ವೈದ್ಯೆಯ ಅತ್ಯಚಾರ ಮತ್ತು ಕೊಲೆ ಪ್ರಕರಣ ಬಳಿಕ ದೇಶವ್ಯಾಪಿ ಪ್ರತಿಭಟನೆ ಆಗಿತ್ತು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಿದ ನಂತರ ಅತ್ಯಾಚಾರ ನಡೆದಿರುವುದು ಧೃಡ ಎಂದು ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು.
ಅತ್ಯಾಚಾರ ಪ್ರಕರಣ:
ಕಳೆದ ಆ.9ರಂದು ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಮೇಲೆ ಸಂಜಯ್ ರಾಯ್ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿದ್ದನು. ಕೊಲೆಯ ನಂತರ ಸಾಕ್ಷ್ಯ ನಾಶಪಡಿಸಲು ರಕ್ತಸಿಕ್ತ ಬಟ್ಟೆಯನ್ನು ತೊಳೆದಿದ್ದನು ಎಂಬುದನು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆ ಪೊಲೀಸ್ ಸ್ವಯಂ ಸೇವಕನಾಗಿದ್ದ ಈತ 4 ಬಾರಿ ಮದುವೆಯಾಗಿದ್ದು, ಪತ್ನಿಯರಿಗೆ ಆಗಾಗ ಕಿರುಕುಳ ನೀಡುತ್ತಿದ್ದನು ಎಂದು ತನಿಖೆಯಿಂದ ತಿಳಿದು ಬಂದಿದೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…