ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಅಲ್ಲು ಅರವಿಂದ್ ಅವರು 2 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ.
ಡಿಸೆಂಬರ್.4ರಂದು ಪುಷ್ಪ-2 ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಎಂಬುವವರು ಮೃತಪಟ್ಟಿದ್ದು, ರೇವತಿ ಪುತ್ರ ಶ್ರೀಜಾ ಕೂಡ ತೀವ್ರ ಗಂಭೀರ ಸ್ಥಿತಿಯಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ನಟ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ಈ ಹಿಂದೆ ಮೃತ ಮಹಿಳೆಯ ಕುಟುಂಬಸ್ಥರಿಗೆ 25 ಲಕ್ಷ ರೂ ಕೊಡುವುದಾಗಿ ತಿಳಿಸಿದ್ದರು. ಆದರೆ ಈಗ ಮೃತ ರೇವತಿ ಕುಟುಂಬಕ್ಕೆ 2 ಕೋಟಿ ರೂ ಪರಿಹಾರ ನೀಡುವುದಾಗಿ ಅಲ್ಲು ಅರವಿಂದ್ ತಿಳಿಸಿದ್ದಾರೆ.
ನಟ ಅಲ್ಲು ಅರ್ಜುನ್ ಕಡೆಯಿಂದ ಒಂದು ಕೋಟಿ ರೂ ಹಾಗೂ ಪುಷ್ಪ-2 ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ ಕಡೆಯಿಂದ 1 ಕೋಟಿ ರೂಪಾಯಿಯನ್ನು ಮೃತ ಮಹಿಳೆ ಕುಟುಂಬಕ್ಕೆ ಕೊಡಲು ನಿರ್ಧರಿಸಿದ್ದಾರೆ.
ಡಿಸೆಂಬರ್.13ರಂದು ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ಅಲ್ಲು ಅರ್ಜುನ್ ರಿಲೀಸ್ ಆಗಿದ್ದರು. ನಿನ್ನೆ ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಸತತ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…