ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ.
ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು ಟಿಆರ್‌ಎಫ್ ತನ್ನ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನು ಪಾಕಿಸ್ತಾನ ಮೂಲಕ ಲಷ್ಕರ್ ಎ ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ಮಾಡಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.
ಸಂಘಟನೆಯು ದಾಳಿಯ ಫೋಟೋಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನು ಖಚಿತಪಡಿಸಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನು ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಹಾಗೂ ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…