ದೇಶ- ವಿದೇಶ

ಪಹಲ್ಗಾಮ್‌ ದಾಳಿ ಹೊಣೆಯನ್ನು ಟಿಆರ್‌ಎಫ್‌ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ           ದಿ ರೆಸಿಸ್ಟೆನ್ಸ್‌ ಫ್ರಂಟ್‌ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ.

ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು ಟಿಆರ್‌ಎಫ್‌ ತನ್ನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನು ಪಾಕಿಸ್ತಾನ ಮೂಲಕ ಲಷ್ಕರ್‌ ಎ ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ಮಾಡಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

ಸಂಘಟನೆಯು ದಾಳಿಯ ಫೋಟೋಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನು ಖಚಿತಪಡಿಸಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನು ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಹಾಗೂ ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

15 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

15 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

16 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

16 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

16 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

16 hours ago