ದೇಶ- ವಿದೇಶ

ತ್ರಿಭಾಷಾ ಫೈಟ್‌: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಟಾಂಗ್‌ ನೀಡಿದ ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌

ಆಂಧ್ರಪ್ರದೇಶ: ಆರ್ಥಿಕ ಲಾಭಕ್ಕಾಗಿ ತಮ್ಮ ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆಂದು ಪ್ರಶ್ನಿಸುವ ಮೂಲಕ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌ ಟಾಂಗ್‌ ನೀಡಿದ್ದಾರೆ.

ತಮಿಳುನಾಡು ಸರ್ಕಾರ ಹಿಂದೆ ಹೇರಿಕೆಯನ್ನು ವಿರೋಧಿಸುತ್ತಿದ್ದು, ಇತ್ತೀಚೆಗೆ ನಡೆದ ತಮಿಳುನಾಡು ರಾಜ್ಯ ಬಜೆಟ್‌ನಲ್ಲಿ ಹಿಂದಿ ಚಿಹ್ನೆಯ ರೂಪಾಯಿ ಬದಲು ತಮಿಳು ಭಾಷೆಯ ರೂಪಾಯಿ ಪದ ಬಳಕೆ ಮಾಡಿ ಈ ಮೂಲಕ ಹಿಂದಿ ಹೇರಿಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಸಿಎಂ ಸ್ಟಾಲಿನ್‌ ಕೂಡ ಕೇಂದ್ರ ಸರ್ಕಾರವೂ ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಈ ಕುರಿತು ಆಂಧ್ರ ಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಪ್ರತಿಕ್ರಿಯೆ ನೀಡಿದ್ದು, ಈ ನಾಯಕರು ಹಿಂದಿಯನ್ನು ವಿರೋಧಿಸುತ್ತಾರೆ. ಆದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡುತ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕೆಲವರು ಸಂಸ್ಕೃತ ಹಾಗೂ ಹಿಂದಿಯನ್ನು ಯಾಕೆ ಟೀಕಿಸುತ್ತಾರೆ ಎಂಬುದು ಗೊತ್ತಿಲ್ಲ. ಆದರೆ ಆರ್ಥಿಕ ಲಾಭಕ್ಕೋಸರ ತಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆ? ಅವರು ಬಾಲಿವುಡ್‌ನಿಂದ ಹಣ ಮಾಡಲು ಬಯಸುತ್ತಾರೆ ಅಷ್ಟೇ. ಹೀಗಾಗಿಯೇ ಹಿಂದಿಯನ್ನು ಸ್ವೀಕರಿಸಲು ನಿರಾಕರಿಸುತ್ತಾರೆ. ಹಾಗಾದರೇ ಇದು ಯಾವ ರೀತಿಯ ತರ್ಕ ಎಂದು ಹೇಳಿದ್ದಾರೆ.

ಭಾರತ ವೈವಿಧ್ಯತೆಯಿಂದ ಕೂಡಿದೆ, ಅದಕ್ಕೆ ಹಿಂದಿ, ತಮಿಳು ಸೇರಿದಂತೆ ಎಲ್ಲಾ ಭಾಷೆಗಳು ಬೇಕು. ಈ ದೇಶದಲ್ಲಿ ಯಾವುದೋ ಎರಡು ಭಾಷೆಗಳಿದ್ದರೆ ಸಾಕಾಗುವುದಿಲ್ಲ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

7 mins ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

2 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

2 hours ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

3 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

3 hours ago