Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ತ್ರಿಪುರಾದಲ್ಲಿ ಮಹಾ ಪ್ರವಾಹ: ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ

ತ್ರಿಪುರಾ: ತ್ರಿಪುರಾದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಉಂಟಾಗಿ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಮೃತರನ್ನು ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾದ ಟಿಎಸ್‌ಆರ್‌ ಜವಾನ್‌ ಆಶಿಶ್‌ ಬೋಸ್‌ ಮತ್ತು ಪಶ್ಚಿಮ ತ್ರಿಪುರಾ ಜಿಲ್ಲೆಯ ಇಂದ್ರನಗರದ ಚಿರಂಜಿತ್‌ ಡೇ ಎಂದು ಗುರುತಿಸಲಾಗಿದೆ.

ಆಗಸ್ಟ್.‌19ರಿಂದ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 24 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದು, 1.28 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

ರಾಜ್ಯದಾದ್ಯಂತ 558 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿರುವ ಪರಿಣಾಮ ಪ್ರವಾಹ ಪರಿಸ್ಥಿತಿಯಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ. ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಕೆಳಗಿಳಿದಿದೆ.

 

Tags:
error: Content is protected !!