ತ್ರಿಪುರಾ: ತ್ರಿಪುರಾದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಉಂಟಾಗಿ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಮೃತರನ್ನು ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾದ ಟಿಎಸ್‌ಆರ್ ಜವಾನ್ ಆಶಿಶ್ ಬೋಸ್ ಮತ್ತು ಪಶ್ಚಿಮ ತ್ರಿಪುರಾ ಜಿಲ್ಲೆಯ ಇಂದ್ರನಗರದ ಚಿರಂಜಿತ್ ಡೇ ಎಂದು ಗುರುತಿಸಲಾಗಿದೆ.
ಆಗಸ್ಟ್.19ರಿಂದ ರಾಜ್ಯದಲ್ಲಿ ಮಳೆ ಸಂಬಂಧಿತ ಅವಘಡಗಳಿಂದ 24 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದು, 1.28 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.
ರಾಜ್ಯದಾದ್ಯಂತ 558 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿರುವ ಪರಿಣಾಮ ಪ್ರವಾಹ ಪರಿಸ್ಥಿತಿಯಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ. ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಕೆಳಗಿಳಿದಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…