ದೇಶ- ವಿದೇಶ

ಇರಾನ್‌ ಜೊತೆಗಿನ ಯುದ್ಧ ವಿರಾಮ ಅನಿರ್ದಿಷ್ಟಾವಧಿಗೆ ವಿಸ್ತರಣೆ : ಟ್ರಂಪ್‌ ಘೋಷಣೆ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ಘೋಷಿಸಿದ್ದಾರೆ.

ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈ ಘೋಷಣೆ ಮಾಡಿದ್ದಾರೆ.

ಆದ್ರೆ ಹಾರ್ಮುಜ್‌ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು‌ ಟ್ರಂಪ್‌ ಹೇಳಿದ್ದಾರೆ.

7 ವಾರಗಳ ಯುದ್ಧದಲ್ಲಿ ಜನ ಮೃತಪಟ್ಟಿದ್ದು, ವಿಶ್ವದ ಆರ್ಥಿಕತೆ ಮೇಲೂ ದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗೆ ಅಮೆರಿಕ ಮುಂದಾಗಿದೆ. ಸದ್ಯ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಟಂಪ್‌ ಹೇಳಿದ್ದೇನು?
ಕದನ ವಿರಾಮ ವಿಸ್ತರಣೆ ಬಗ್ಗೆ ಮಾತನಾಡಿರುವ ಟ್ರಂಪ್‌, ಪಾಕಿಸ್ತಾನದ ಮನವಿ ಸ್ವೀಕರಿಸಿ, ಅದರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ, ಇರಾನ್ ನಾಯಕರು ಒಪ್ಪಂದಕ್ಕೆ ಮುಂದೆ ಬರುವವರೆಗೂ ದಾಳಿಯನ್ನ ತಡೆಯಲಾಗುವುದು ಎಂದಿದ್ದಾರೆ. ಇದೇ ವೇಳೆ ಇರಾನ್ ಬಂದರುಗಳಿಗೆ ದಿಗ್ಬಂಧನ ಹಾಕಿರುವ ಅಮೆರಿಕದ ನೌಕಾ ಸೇನಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.

ಇದಕ್ಕೆ ಇರಾನ್ ಪ್ರಮುಖ ನಾಯಕರು ತಕ್ಷಣದ ಪ್ರತಿಕ್ರಿಯೆ ಏನೂ ನೀಡಿಲ್ಲ. ಆದರೆ ಮಾಧ್ಯಮಗಳ ಪ್ರಕಾರ ಟೆಹ್ರಾನ್ ಕಡೆಯಿಂದ ಕದನ ವಿರಾಮಕ್ಕೆ ಯಾವುದೇ ಮನವಿ ಮಾಡಿರಲಿಲ್ಲ ಎಂದು ಹೇಳಿದೆ. ಇರಾನ್ ಜೊತೆಗಿನ ಸಂಧಾನ ಮುಗಿಯುವವರೆಗೆ ಕದನ ವಿರಾಮ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

1 hour ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

1 hour ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

1 hour ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

1 hour ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

2 hours ago