ವಾಷಿಂಗ್ಟನ್: ಇರಾನ್ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ.
ಕ್ಯೂಬಾ ದೇಸದ ಮೇಲೆ ಕಣ್ಣಿಟ್ಟಿರುವ ಡೊನಾಲ್ಡ್ ಟ್ರಂಪ್ ಅವರು, ನಾನು ಆ ದೇಶವನ್ನು ವಶಪಡಿಸಿಕೊಳ್ಳುತ್ತೇವೆ ಅಥವಾ ಸ್ವತಂತ್ರಗೊಳಿಸುತ್ತೇನೆ ಎಂದು ಹೇಳಿದ್ದಾರೆ. ಈ ಬೆಳವಣಿಗೆಯು ಅಮೇರಿಕಾದ ರಾಜಕೀಯ ವಲಯದಲ್ಲಿ ಹೊಸ ಅಲೆ ಎಬ್ಬಿಸಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಯೂಬಾ ವಿರುದ್ಧ ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತದೆ ಎಂಬುದನ್ನು ಹೇಳದಿದ್ದರೂ ಕೆಲವೊಮ್ಮೆ ಬಲವಾದ ಮಿಲಿಟರಿ ಪಡೆಯನ್ನು ಪ್ರಯೋಗಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.





