ದೇಶ- ವಿದೇಶ

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.

ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ.

ಜಿನ್‌ಪಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ನಿಮ್ಮೊಂದಿಗೆ ಇರುವುದು ಮತ್ತು ನಿಮ್ಮ ಸ್ನೇಹಿತನಾಗಿರುವುದು ನನಗೆ ಹೆಮ್ಮೆಯ ವಿಷಯ. ಚೀನಾ ಮತ್ತು ಅಮೆರಿಕ ನಡುವಿನ ಸಂಬಂಧವು ಹಿಂದೆಂದಿಗಿಂತಲೂ ಉತ್ತಮವಾಗಲಿದೆ ಎಂದು ಆಶಾವಾದವನ್ನು ವ್ಯಕ್ತಪಡಿಸಿದರು.

ನಾನು ಜಿನ್‌ಪಿಂಗ್ ಅವರನ್ನು ಒಬ್ಬ ಶ್ರೇಷ್ಠ ನಾಯಕ ಎಂದು ಎಲ್ಲರ ಬಳಿ ಹೇಳುತ್ತೇನೆ. ಕೆಲವರಿಗೆ ನಾನು ಹೀಗೆ ಹೇಳುವುದು ಇಷ್ಟವಾಗುವುದಿಲ್ಲ, ಆದರೆ ಇದು ಸತ್ಯ. ನಾನು ಕೇವಲ ಸತ್ಯವನ್ನಷ್ಟೇ ಹೇಳುತ್ತೇನೆ ಎಂದರು.

ತನಗೆ ನೀಡಲಾದ ಅದ್ಧೂರಿ ರಾಜತಾಂತ್ರಿಕ ಸ್ವಾಗತವನ್ನು ನೋಡಿ, ಇದು ಕೆಲವೇ ಜನರಿಗೆ ಮಾತ್ರ ಸಿಗುವಂತಹ ಅತ್ಯುನ್ನತ ಗೌರವ ಎಂದು ಸಂತಸ ವ್ಯಕ್ತಪಡಿಸಿದರು. ಚೀನಾ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡುತ್ತಾ, ನೀವು ಮಾಡಿರುವ ಕೆಲಸಗಳ ಬಗ್ಗೆ ಮತ್ತು ಚೀನಾದ ಮೇಲೆ ನನಗೆ ಅಪಾರ ಗೌರವವಿದೆ ಎಂದು ಹರ್ಷಿಸಿದರು.

ತನ್ನೊಂದಿಗೆ ಬಂದಿರುವ ಟೆಸ್ಲಾ ಮುಖ್ಯಸ್ಥ ಎಲೋನ್‌ ಮಸ್ಕ್, ಆಪಲ್‌ ಸಿಇಒ ಟಿಮ್ ಕುಕ್ ಮತ್ತು ಎನ್‌ವಿಡಿಯಾ ಮುಖ್ಯಸ್ಥ ಜೆನ್ಸನ್ ಹುವಾಂಗ್ ಅವರಂತಹ ಬಿಲಿಯನೇರ್ ಉದ್ಯಮಿಗಳನ್ನು ಜಿನ್‌ಪಿಂಗ್‌ಗೆ ಪರಿಚಯಿಸುತ್ತಾ, ನಾನು ಜಗತ್ತಿನ ಅತ್ಯುತ್ತಮ ಉದ್ಯಮಿಗಳನ್ನು ಇಲ್ಲಿಗೆ ಕರೆತಂದಿದ್ದೇನೆ. ನಿಮಗೆ ಗೌರವ ಸಲ್ಲಿಸಲು ಕೇವಲ ಪ್ರಮುಖ ವ್ಯಕ್ತಿಗಳು ಮಾತ್ರ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿಸಿದರು.

ಜಿನ್‌ಪಿಂಗ್‌ ಹೇಳಿದ್ದೇನು?
ಟ್ರಂಪ್‌ ಮೆಚ್ಚುಗೆಗೆ ಪ್ರತಿಯಾಗಿ ಮಾತನಾಡಿದ ಕ್ಸಿ ಜಿನ್‌ಪಿಂಗ್, ಚೀನಾ ಮತ್ತು ಅಮೆರಿಕ ದೇಶಗಳು ಪರಸ್ಪರ ಪ್ರತಿಸ್ಪರ್ಧಿಗಳಾಗುವ ಬದಲು ಪಾಲುದಾರರಾಗಬೇಕು ಎಂದು ಕರೆ ನೀಡಿದರು.

ವಿಶ್ವವು ಇಂದು ಒಂದು ಹೊಸ ಜಾಗತಿಕ ಅಡ್ಡರಸ್ತೆಯಲ್ಲಿದೆ ಮತ್ತು ಇಡೀ ಜಗತ್ತು ಈ ಮಹತ್ವದ ಸಭೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಚೀನಾ-ಅಮೆರಿಕ ನಡುವಿನ ಸದೃಢ ಮತ್ತು ಸ್ಥಿರವಾದ ಬಾಂಧವ್ಯವು ಇಡೀ ಜಗತ್ತಿಗೆ ಸಿಗುವ ಒಂದು ದೊಡ್ಡ ವರ ಎಂದು ಬಣ್ಣಿಸಿದರು.

ಉದಯೋನ್ಮುಖ ಶಕ್ತಿಯೊಂದು ಹಳೆಯ ಬಲಿಷ್ಠ ಶಕ್ತಿಯನ್ನು ಮೀರಿಸಲು ಹೊರಟಾಗ ಸಂಘರ್ಷ ಅನಿವಾರ್ಯ ಎಂಬ ಜಾಗತಿಕ ರಾಜತಾಂತ್ರಿಕ ಸಿದ್ಧಾಂತವನ್ನು ಎರಡೂ ದೇಶಗಳು ಮೀರಿ ನಿಲ್ಲಬೇಕಿದೆ. ನಾವು ಪರಸ್ಪರ ಯಶಸ್ಸನ್ನು ಸಾಧಿಸುತ್ತಾ, ಒಟ್ಟಿಗೆ ಅಭಿವೃದ್ಧಿ ಹೊಂದುವ ಹೊಸ ಮಾದರಿಯ ಬಲಿಷ್ಠ ರಾಷ್ಟ್ರಗಳ ಸಂಬಂಧವನ್ನು ಜಗತ್ತಿಗೆ ಪರಿಚಯಿಸಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

8 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago