ದೇಶ- ವಿದೇಶ

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ವೈಟ್‌ ಹೌಸ್‌ ಕರೆಸ್ಪಾಂಡೆಂಟ್ಸ್  ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ‌ ಈ ಸಂಬಂಧ ದಾಳಿಕೋರನ ಚಿತ್ರ ಹಾಗೂ ವಿಡಿಯೊವನ್ನು ಟ್ರಂಪ್‌ ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಟ್ರುಥ್‌ನಲ್ಲಿ ಹಂಚಿಕೊಂಡಿರುವ ಚಿತ್ರದಲ್ಲಿ, ಬಂಧಿತ ಆರೋಪಿಗೆ ಕೈಕೋಳ ತೊಡಿಸಲಾಗಿದೆ. ಹತ್ತಿರದಲ್ಲಿಯೇ ಭದ್ರತಾ ಸಿಬ್ಬಂದಿ ಇದ್ದಾರೆ.

ಈ ದಾಳಿಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೊವನ್ನೂ ಸಹ ಟ್ರಂಪ್‌ ಹಂಚಿಕೊಂಡಿದ್ದಾರೆ.

ಶಂಕಿತ ಶೂಟರ್‌ ಕ್ಯಾಲಿಫೋರ್ನಿಯಾದ 30 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ. ಕೃತ್ಯದ ಹಿಂದಿನ ಉದ್ದೇಶವೇನು ಎಂಬುದರ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ.

ಟ್ರಂಪ್ ಪ್ರತಿಕ್ರಿಯೆ
ಘಟನೆಯ ನಂತರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, ಭದ್ರತಾ ಪಡೆಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. “ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಅವರು ಅತ್ಯಂತ ವೇಗವಾಗಿ ಮತ್ತು ಧೈರ್ಯದಿಂದ ಕಾರ್ಯನಿರ್ವಹಿಸಿದ್ದಾರೆ. ಶೂಟರ್‌ನನ್ನು ಈಗಾಗಲೇ ಬಂಧಿಸಲಾಗಿದೆ. ನಾನು ಕಾರ್ಯಕ್ರಮವನ್ನು ಮುಂದುವರಿಸಲು ಸೂಚಿಸಿದ್ದೇನೆ. ಆದರೆ ಭದ್ರತೆಯ ದೃಷ್ಟಿಯಿಂದ ಅಂತಿಮ ನಿರ್ಧಾರವನ್ನು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇನೆ” ಎಂದು ಟ್ರಂಪ್ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

18 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

27 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago