ದೇಶ- ವಿದೇಶ

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಇರಾನ್‌ಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದಾರೆ.

ಇರಾನ್ ಮೂಲಸೌಕರ್ಯಗಳು, ಅಣು ವಿದ್ಯುತ್ ಘಟಕಗಳು, ಸೇತುವೆಗಳ ಮೇಲಿನ ದಾಳಿಯ ನಿರ್ಧಾರವನ್ನೂ ಟ್ರಂಪ್ ಹಿಂಪಡೆದಿದ್ದಾರೆ. ಇದಕ್ಕೂ ಮೊದಲು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಗಡುವು ಕೊಟ್ಟು, ಒಪ್ಪದಿದ್ದರೆ ಮಂಗಳವಾರ ರಾತ್ರಿ 8 ಗಂಟೆಗೆ ಇದರ ಅವಧಿ ಮುಗಿದು ಇರಾನ್‌ನ ಸರ್ವನಾಶ ಮಾಡುವುದಾಗಿ ಟ್ರಂಪ್ ಬೆದರಿಕೆ ಒಡ್ಡಿದ್ದರು. ಇದೀಗ ಈ ಗಡುವು 2 ವಾರ ಮುಂದೂಡಿಕೆಯಾಗಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅವರು ಮಧ್ಯಸ್ಥಿಕೆ ವಹಿಸಿ ಕೊಟ್ಟ ಪ್ರಸ್ತಾವನೆಯನ್ನು ಒಪ್ಪಿರುವುದಾಗಿ ಟ್ರಂಪ್ ಹೇಳಿದ್ದಾರೆ. ಈ ಪ್ರಸ್ತಾವನೆ ಪ್ರಕಾರ ಹರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯಬೇಕು. ಹಾಗೂ 2 ವಾರಗಳ ಕಾಲ ಕದನ ವಿರಾಮ ಮುಂದುವರಿಯುವ ಕುರಿತಾಗಿ ಇದೆ.

ಇನ್ನು ಈ 2 ವಾರಗಳ ಗಡುವನ್ನು ಇರಾನ್ ಜೊತೆ ಅಂತಿಮ ಒಪ್ಪಂದಕ್ಕೆ ಬರಲು ಬಳಸಲಾಗುವುದು ಎಂದು ಟ್ರಂಪ್ ಹೇಳಿದ್ದಾರೆ. ಈಗಾಗಲೇ ಅಮೆರಿಕ ಎಲ್ಲಾ ಮಿಲಿಟರಿ ಗುರಿಗಳನ್ನು ತಲುಪಿದ್ದು, ಮಧ್ಯಪ್ರಾಚ್ಯದಲ್ಲಿ ಒಂದು ದೀರ್ಘಕಾಲದ ಶಾಂತಿಗಾಗಿ ಒಂದು ನಿಖರ ಒಪ್ಪಂದದ ಹಾದಿಯಲ್ಲಿದ್ದೇವೆ ಎಂದಿದ್ದಾರೆ.

ಇರಾನ್‌ ಕೂಡಾ ತನ್ನ ಬೇಡಿಕೆಯ 10 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಕೊಟ್ಟಿದೆ. ಇನ್ನೊಂದೆಡೆ ಹರ್ಮುಜ್ ತಕ್ಷಣ ತೆರೆದರೆ ಮಾತ್ರ 2 ವಾರಗಳ ಕದನ ವಿರಾಮ ಎಂದೂ ಟ್ರಂಪ್ ಷರತ್ತು ವಿಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈ ಕದನ ವಿರಾಮವನ್ನು ಸ್ವಾಗತಿಸಿದ್ದಾರೆ. ಪಾಕಿಸ್ತಾನದ ವಿನಂತಿಯ ಮೇರೆಗೆ ಅಮರಿಕದ 15 ಅಂಶಗಳ ಪ್ರಸ್ತಾವನೆಯನ್ನು ಮಾತುಕತೆ ನಡೆಸಲು ಸಿದ್ದರಿದ್ದೇವೆ. ಅಮೆರಿಕ ದಾಳಿ ಮಾಡುವುದು ನಿಲ್ಲಿಸಿದರೆ, ನಮ್ಮ ಸಶಸ್ತ್ರ ಪಡೆಗಳು ಕೂಡಾ ಪ್ರತಿದಾಳಿಯನ್ನು ನಿಲ್ಲಿಸುತ್ತದೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

3 mins ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

22 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

30 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

32 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

39 mins ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

46 mins ago