ದೇಶ- ವಿದೇಶ

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ ದಿಗ್ಬಂಧನ ವಿಧಿಸಿದ್ದು, ಐಆರ್‌ಜಿಸಿ ಹಾಗೂ ಅಮೆರಿಕ ಪಡೆ ನಡುವೆ ಜಲಸಂಧಿಯ ನಿಯಂತ್ರಣದ ಕುರಿತು ಜಟಾಪಟಿ ನಡೆಯುತ್ತಿದೆ.

ಈ ಬೆನ್ನಲ್ಲೇ, ಇದೀಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊರ್ಮುಜ್‌ ಜಲಸಂಧಿಯನ್ನು “ಟ್ರಂಪ್ ಜಲಸಂಧಿ” ಎಂದು ಮರುನಾಮಕರಣ ಮಾಡಿರುವ ನಕ್ಷೆಯನ್ನು ತೋರಿಸುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹೊರ್ಮುಜ್‌ ಜಲಸಂಧಿಯಲ್ಲಿ ನಿಯಂತ್ರಣಕ್ಕಾಗಿ ಹಾತೊರೆಯುತ್ತಿರುವ ಡೊನಾಲ್ಡ್‌ ಟ್ರಂಪ್‌ ಪ್ರಾದೇಶಿಕವಾಗಿ ಉದ್ವಿಗ್ನತೆ ಉಲ್ಬಣವಾಗುತ್ತಿದ್ದಂತೆ ಇದೀಗ ತಮ್ಮ ಟ್ರುತ್‌ ಸೋಶಿಯಲ್‌ ಖಾತೆಯ ಮೂಲಕ ಮತ್ತೊಂದು ವಿವಾದಾತ್ಮಕ ಪೋಸ್ಟ್‌ಅನ್ನು ರಿಪೋಸ್ಟ್‌ ಮಾಡಿದ್ದು, ಇದರಲ್ಲಿ ಪರ್ಶಿಯನ್‌ ಕೊಲ್ಲಿಯಲ್ಲಿ ಇರಾನ್‌ ಸಮೀಪವಿರುವ ಜಾಗತಿಕ ವಾಣಿಜ್ಯ ಸಂಚಾರದ ನಿರ್ಣಾಯಕ ಚೋಕ್‌ ಪಾಯಿಂಟ್‌ ಆಗಿರುವ ಹೊರ್ಮುಜ್‌ ಜಲಸಂಧಿಯ ನಕ್ಷೆಯನ್ನು ಹಂಚಿಕೊಂಡಿದ್ದು, ಇದರಲ್ಲಿ ʼಟ್ರಂಪ್‌ ಜಲಸಂಧಿʼ ಎಂದು ತೋರಿಸಲಾಗಿದೆ.

ಇದು ಸದ್ಯ ಹೊರ್ಮುಜ್‌ ಜಲಸಂಧಿ ವಿಚಾರದಲ್ಲಿ ಜಲಮಾರ್ಗದಲ್ಲೂ ತನ್ನ ಹೆಸರನ್ನು ಛಾಪು ಮೂಡಿಸುವ ಇಂಗಿತವನ್ನು ಬಹಿರಂಗವಾಗಿ ಬಿಚ್ಚಿಡುತ್ತಿದ್ದು, ಶಾಂತಿ ಮಾತುಕತೆ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ. ಅಲ್ಲದೆ,ಇದಕ್ಕೆ ಇರಾನ್‌ ಹೇಗೆ ಪ್ರತಿಕ್ರಿಯೆ ನೀಡಲಿದೆ ಎಂದು ಕಾದು ನೋಡಬೇಕಿದೆ

 

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago