ದೇಶ- ವಿದೇಶ

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಠಿಣ ಬೆದರಿಕೆ ಹಾಕಿದ್ದಾರೆ.

ಏಪ್ರಿಲ್ 5ರಂದು ತಮ್ಮ ಸಾಮಾಜಿಕ ಮಾಧ್ಯಮ ಟ್ರೂಥ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇರಾನ್‌ಗೆ 48 ಗಂಟೆಗಳ ಕಾಲ ಸಮಯ ನೀಡಿದ್ದಾರೆ.

ಗಡುವು ಸಮಯದ ಒಳಗೆ ಜಲಸಂಧಿಯನ್ನು ಪೂರ್ಣವಾಗಿ ತೆರೆಯಬೇಕು. ಇಲ್ಲವಾದರೆ ನಿಮ್ಮ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಈ ಹಿಂದೆಯೂ ಟ್ರಂಪ್‌ ಇದೇ ರೀತಿ ಎಚ್ಚರಿಕೆ ನೀಡಿದ್ದರು. ಆದರೆ ಇರಾನ್‌ ಇದುವರೆಗೂ ಬೆದರಿಕೆಗೆ ಕ್ಯಾರೆ ಎಂದಿಲ್ಲ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ವಿಶ್ವದ ಒಂದು ಐದನೇ ಭಾಗದ ತೈಲ ಸಾಗಣೆಯ ಮುಖ್ಯ ಮಾರ್ಗವಾದ ಈ ಜಲಸಂಧಿ ಮುಚ್ಚಿರುವುದರಿಂದ ಜಾಗತಿಕ ತೈಲ ಸಂಚಾರಕ್ಕೆ ತೀವ್ರ ಬಿಕ್ಕಟ್ಟು ಉಂಟಾಗಿದೆ.

ಇದೇ ಸಂದರ್ಭದಲ್ಲಿ ಇರಾನ್ ಹೊಡೆದುರುಳಿಸಿದ ಅಮೆರಿಕದ F-15 ಯುದ್ಧ ವಿಮಾನದ ಪೈಲಟ್ ಅನ್ನು ರಕ್ಷಣೆ ಮಾಡಲಾಗಿದೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

2 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

2 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

2 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

2 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 hours ago