ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕೊನೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಈ ಬೆದರಿಕೆಯಿಂದಾಗಿ ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು ಎಂದು ಅಂದಾಜಿಸಲಾಗಿದೆ. ಈ ದಾಳಿಯಿಂದ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ.
ಮಾರ್ಚ್ 26ರಂದು ಟ್ರಂಪ್ 10 ದಿನಗಳ ಗಡುವು ನೀಡಿದ್ದರು. ನಂತರ ಅವರು, ಭಾನುವಾರ ಅಂತಿಮ 48 ಗಂಟೆಗಳ ಗಡುವನ್ನು ನೀಡಿದ್ದಾರೆ. ಹಾರ್ಮುಜ್ ಚೋಕ್ ಪಾಯಿಂಟ್, ಬುಶೆಹರ್ ಪರಮಾಣು ಸ್ಥಾವರ, ದಕ್ಷಿಣ ಪಾರ್ಸ್ ಅನಿಲ ಕ್ಷೇತ್ರ, ಖಾರ್ಕ್ ದ್ವೀಪದ ತೈಲ ಕೇಂದ್ರ, ಅಬದಾನ್ ಸಂಸ್ಕರಣಾಗಾರ, ಬಂದರ್ ಅಬ್ಬಾಸ್ ಸಂಸ್ಕರಣಾಗಾರ, ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕ ಎಚ್ಚರಿಕೆ ನೀಡಿದೆ.
ಭೀಕರ ಪ್ರತಿದಾಳಿ : ಇರಾನ್
ಇದರ ಜೊತೆಗೆ, ಇರಾನ್ ಸಂಯುಕ್ತ ಕಮಾಂಡ್ ಮತ್ತೊಂದು ಎಚ್ಚರಿಕೆ ನೀಡಿದ್ದು, ಅಮೆರಿಕ ಅಥವಾ ಇಸ್ರೇಲ್ ಇರಾನ್‌ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದರೆ, ನಾವು ಇನ್ನಷ್ಟು ಭೀಕರ ಪ್ರತಿದಾಳಿ ನಡೆಸುತ್ತೇವೆಂದು ಘೋಷಿಸಿದೆ. ಇಸ್ರೇಲ್ ದಾಳಿ ನಂತರ ಗಲ್ಛ್ ದೇಶಗಳು ಮತ್ತು ಇಸ್ರೇಲ್‌ನ ತೈಲ ಮತ್ತು ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಸರ್ಕಾರ ಹೇಳಿಕೊಂಡಿದೆ. ನೀವು ಮತ್ತೆ ನಾಗರಿಕ ಸೌಲಭ್ಯಗಳನ್ನು ಗುರಿಯಾಗಿಸಿದರೆ, ನಮ್ಮ ಪ್ರತಿಕ್ರಿಯೆ ಇನ್ನಷ್ಟು ಭೀಕರವಾಗಿರುತ್ತದೆ ಎಂದು ಎಚ್ಚರಿಸಿದೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…