ದೇಶ- ವಿದೇಶ

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ ನಡೆಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕೊನೆ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ಈ ಬೆದರಿಕೆಯಿಂದಾಗಿ ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು ಎಂದು ಅಂದಾಜಿಸಲಾಗಿದೆ. ಈ ದಾಳಿಯಿಂದ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ.

ಮಾರ್ಚ್ 26ರಂದು ಟ್ರಂಪ್ 10 ದಿನಗಳ ಗಡುವು ನೀಡಿದ್ದರು. ನಂತರ ಅವರು, ಭಾನುವಾರ ಅಂತಿಮ 48 ಗಂಟೆಗಳ ಗಡುವನ್ನು ನೀಡಿದ್ದಾರೆ. ಹಾರ್ಮುಜ್ ಚೋಕ್ ಪಾಯಿಂಟ್, ಬುಶೆಹರ್ ಪರಮಾಣು ಸ್ಥಾವರ, ದಕ್ಷಿಣ ಪಾರ್ಸ್ ಅನಿಲ ಕ್ಷೇತ್ರ, ಖಾರ್ಕ್ ದ್ವೀಪದ ತೈಲ ಕೇಂದ್ರ, ಅಬದಾನ್ ಸಂಸ್ಕರಣಾಗಾರ, ಬಂದರ್ ಅಬ್ಬಾಸ್ ಸಂಸ್ಕರಣಾಗಾರ, ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕ ಎಚ್ಚರಿಕೆ ನೀಡಿದೆ.

ಭೀಕರ ಪ್ರತಿದಾಳಿ : ಇರಾನ್
ಇದರ ಜೊತೆಗೆ, ಇರಾನ್ ಸಂಯುಕ್ತ ಕಮಾಂಡ್ ಮತ್ತೊಂದು ಎಚ್ಚರಿಕೆ ನೀಡಿದ್ದು, ಅಮೆರಿಕ ಅಥವಾ ಇಸ್ರೇಲ್ ಇರಾನ್‌ನ ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದರೆ, ನಾವು ಇನ್ನಷ್ಟು ಭೀಕರ ಪ್ರತಿದಾಳಿ ನಡೆಸುತ್ತೇವೆಂದು ಘೋಷಿಸಿದೆ. ಇಸ್ರೇಲ್ ದಾಳಿ ನಂತರ ಗಲ್ಛ್ ದೇಶಗಳು ಮತ್ತು ಇಸ್ರೇಲ್‌ನ ತೈಲ ಮತ್ತು ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇರಾನ್ ಸರ್ಕಾರ ಹೇಳಿಕೊಂಡಿದೆ. ನೀವು ಮತ್ತೆ ನಾಗರಿಕ ಸೌಲಭ್ಯಗಳನ್ನು ಗುರಿಯಾಗಿಸಿದರೆ, ನಮ್ಮ ಪ್ರತಿಕ್ರಿಯೆ ಇನ್ನಷ್ಟು ಭೀಕರವಾಗಿರುತ್ತದೆ ಎಂದು ಎಚ್ಚರಿಸಿದೆ.

 

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

1 hour ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

2 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

3 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

3 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago