Mysore
17
few clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

ನವದೆಹಲಿ: 3 ವರ್ಷಗಳ ಅವಧಿಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (SEBI) ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ ಹಣಕಾಸು ಕಾರ್ಯದರ್ಶೀ ಪಾಂಡೆ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಅದೇಶ ಹೊರಡಿಸಿದೆ.

ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್‌ ಅವರ ಅಧಿಕಾರವದಿ ಮಾ.1ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2ರಂದು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಂಡೆ ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಸಾರ್ವಜನಿಕ ಉದ್ಯಮಗಳ ಇಲಾಖೆ(DPE), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (DIPAM)ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಹಣಕಾಸು ಕಾರ್ಯದರ್ಶಿಯಾಗುವ ಮೊದಲು ತುಹಿನ್‌ ಪಾಂಡೆ ಅವರು ಅನೇಖ ಇಲಾಖೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2025ರ ಆರಂಭದಲ್ಲಿ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

Tags:
error: Content is protected !!